CM ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡಿಸಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು CM ಭರವಸೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, 'ಫೆಬ್ರವರಿ, ಮಾರ್ಚ್ ನಲ್ಲಿ ಗೃಹಲಕ್ಷ್ಮೀ ಹಣ ಸಂದಾಯ ಆಗಿಲ್ಲ ಎಂದು ಹೇಳಿದ್ದಾರೆ. ಗೃಹಲಕ್ಷ್ಮಿ ಹಣ ನೀಡಿದಿದ್ದರೆ ಅದನ್ನು ಕೂಡಲೇ ಕೊಡಿಸುವ ಕೆಲಸವನ್ನು ಸರಕಾರ ಮಾಡಲಿದೆ. ಆಗಸ್ಟ್ ತಿಂಗಳವರೆಗೆ ಹಣ ಪಾವತಿ ಮಾಡಲಾಗಿದೆ. ಈ ಬಗ್ಗೆ ಪರಿಶೀಲನೆ ಮಾಡಿ ಹಣ ಸಂದಾಯ ಮಾಡುತ್ತೇವೆ ಎಂದು ನುಡಿದರು.
