ಮಂಗಳೂರಿಗೆ ಆಗಮಿಸಿದ ಗೃಹ ಸಚಿವರು

|

ಮಂಗಳೂರು :ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಘಟನೆ ಹಿನ್ನಲೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದಾರೆ. ಘಟನೆ ಬಳಿಕ ಕೈಗೊಂಡಿರುವ ಬಿಗಿ ಬಂದೋಬಸ್ತ್ ಮತ್ತು ಇತರೆ ಕಾನೂನು ಸುವ್ಯವಸ್ಥೆಗಳ ಕುರಿತಂತೆ ಸರ್ಕ್ಯೂಟ್‌ ಹೌಸ್‌ನಲ್ಲಿ ಮುಸ್ಲಿಂ ಮುಖಂಡರ ಜತೆಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸುಹಾಸ್ ಹತ್ಯೆ ಬಳಿಕ ಮೂವರು ಮುಸ್ಲಿಂ ಯುವಕರ ಮೇಲೆ ನಡೆದಿರುವ ದಾಳಿ ಯತ್ನದ ಬಗ್ಗೆಯೂ ಗೃಹ ಸಚಿವರ ಗಮನಕ್ಕೆ ತಂದು ಅಗತ್ಯ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಸಭೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೂಡ ಭಾಗಿಯಾಗಿದ್ದಾರೆ.