ಅತ್ಯಾಚಾರ ಪ್ರಕರಣದಲ್ಲಿ ಅಂದರ್ ಆಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ. ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಇದನ್ನು ಪ್ರಶ್ನಿಸಿದ ಪ್ರಜ್ವಲ್ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ಸಂದರ್ಭದಲ್ಲಿ, ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಮಧ್ಯಂತರ ಅರ್ಜಿಯನ್ನು ಬುಧವಾರ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
