ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ

|

ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಬೆಳಗಾವಿ ಸಕಲ ರೀತಿಯಲ್ಲಿ ಸಜ್ಜಾಗಿದೆ. ಚಳಿಗಾಲದ ಅಧಿವೇಶನ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ. ಡಿ.19 ವರೆಗೆ 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, 21ಕ್ಕೂ ಹೆಚ್ಚು ವಿಧೇಯಕಗಳ ಮಂಡನೆ ಸಾಧ್ಯತೆ ಇದೆ. ದ್ವೇಷ ಭಾಷಣ ತಡೆಗೆ ಹೊಸ ಕಾನೂನು, ಸಾಮಾಜಿಕ ಬಹಿಷ್ಕಾರ ವನ್ನು ಶಿಕ್ಷಾರ್ಹ ಅಪರಾಧವಾಗಿ ಪರಿಗಣಿಸುವ ಎರಡು ವಿಧೇಯಕ, ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ತಿದ್ದುಪಡಿ ವಿಧೇಯಕಗಳು ಚರ್ಚೆಗೆ ಬರಲಿವೆ.