ಪುತ್ತೂರು : ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ನಡೆದಿದೆ, ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಬೈಕಿ ನಲ್ಲಿದ ಇಬ್ಬರೂ ಸವಾರರಿಗೆ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅರುಣ್ ಕುಲಾಲ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.