ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಕ್ಷಿಣ ಕನ್ನಡದ ಐದು ತಾಲೂಕುಗಳಲ್ಲಿ ಮದ್ಯ. ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲ್ಯೈಮುಗಿಲನ್ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಾದ್ಯಂತ ತಕ್ಷಣದಿಂದಲೇ ಮದ್ಯದಂಗಡಿಗಳನ್ನು ಮುಚ್ಚಲಾಗಿದ್ದು, ನಾಳೆ(ಮೇ3) ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.