ಪುತ್ತೂರು: ಜೀವನದಲ್ಲಿ ಜಿಗುಪ್ಸೆ ಗೊಂಡು ಯುವತಿ ಆತ್ಮಹತ್ಯೆ ಗೆ ಶರಣು

|

ಪುತ್ತೂರು: ಜೀವನದಲ್ಲಿ ಜಿಗುಪ್ಸೆಗೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರು ತಾಲೂಕಿನ ಕೆಯ್ಯರು ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ನೀತಾ (22) ಎಂದು ಗುರುತಿಸಲಾಗಿದೆ.ಮೃತ ನೀತಾ ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, 2016ರ ನಂತರ ಆಕೆಗೆ ತಲೆನೋವು ಆರಂಭವಾಗಿ ಚಿಕಿತ್ಸೆ ಪಡೆಯುತ್ತಿದ್ದರು. 2020ರ ನಂತರ ಕುತ್ತಿಗೆ, ಬೆನ್ನುಹುರಿ ಮತ್ತು ತಲೆಯಲ್ಲಿ ನರ ದೋಷ ಉಂಟಾದ ಕಾರಣ ಮಂಗಳೂರಿನ ಖಾಸಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸಮಸ್ಯೆ ಯಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.