ಬಂಟ್ವಾಳ: ಅಪರಿಚಿತ ಮಹಿಳೆಯೋರ್ವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ, ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿ ಹಾಕಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್. ಐ.ಸಂದೀಪ್ ಶೆಟ್ಟಿ ತಿಳಿಸಿದ್ದಾರೆ.ಸುಮಾರು (60) ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಅಂದಾಜು ಪ್ರಕಾರ ಇಂದು ಬೆಳಿಗ್ಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ.ಅಪರಿಚಿತ ಮಹಿಳೆಯ ಮೃತದೇಹದ ಪತ್ತೆಗಾಗಿ ಬಂಟ್ವಾಳ ಪೋಲೀಸರು ತಿಳಿಸಿದ್ದು, ಮಹಿಳೆಯ ಸಂಬಂಧಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.
