ಮಂಗಳೂರು : ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮಂಗಳೂರಿನ ಕಡಲ ತೀರದಲ್ಲಿ ಕರಾವಳಿ ಕಾವಲು ಪಡೆಯಿಂದ ಕಟ್ಟೆಚ್ಚರ ವಹಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿರುವ ಕರಾವಳಿ ಕಾವಲು ಪಡೆ ಪೊಲೀಸರು ಬಂದರು ಕಡಲ ತೀರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್ ಗಳನ್ನು ತಪಾಸಣೆ ನಡೆಸಿ ಮೀನುಗಾರರ ದಾಖಲೆ ಪರಿಶೀಲಿಸಿದ್ದಾರೆ.ಸದ್ಯ ಅನುಮಾನಾಸ್ಪದ ಬೋಟ್‌ಗಳ ಮೇಲೆ ನಿಗಾ ಇಟ್ಟಿರುವ ಪೊಲೀಸರು ತಪಾಸಣೆ ಮುಂದುವರೆಸಿದ್ದಾರೆ.