ಮೆಲ್ಕಾರ್: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ-ನಾಲ್ವರಿಗೆ ಗಾಯ

|

ಮೆಲ್ಕಾರ್:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮೆಲ್ಕಾ‌ರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮಗು ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಡಿ.3ರಂದು ಸಂಜೆ ನಡೆದಿದೆ.ಅಪಘಾತದಿಂದ ಕಾರಿನಲ್ಲಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ, ಕಬಕ ನಿವಾಸಿ ಸತೀಶ್ ರಾವ್, ಅವರ ಪತ್ನಿ, ಪಡುಮಲೆ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಉದಯ ಭಟ್ ಹಾಗೂ ಕಾರಿನಲ್ಲಿದ್ದ ಮಗುವಿಗೆ ಗಾಯಗಳಾದ್ದು, ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮಂಗಳೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಮೆಲ್ಕಾರ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದೆ.