ಶ್ರೀ ದುರ್ಗಾಂಬಾ ಪ್ರೌಢ ಶಾಲೆ ಆಲಂಕಾರಿಗೆ ಶೇಕಡ 100 ಫಲಿತಾಂಶ

|

 ಆಲಂಕಾರು : ಶ್ರೀ ದುರ್ಗಾಂಬಾ ಪ್ರೌಢ ಶಾಲೆ ಆಲಂಕಾರು ಇಲ್ಲಿ ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ. ಒಟ್ಟು 41 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ ಚಿತ್ರೇಶ್ - 611, ಧನ್ವಿ - 568, ರಾಶಿಕಾ - 554, ರೂಪಿಕ - 549, ರೂಪಿತ - 536, ಪ್ರಣಮ್ಯ - 533

ಅಂಕ ಪಡೆದು ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ಹಾಗೂ 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 09 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ . ಉತ್ತಮ ಫಲಿತಾಂಶ ದಾಖಲಿಸುವಲ್ಲಿ ಮಾರ್ಗದರ್ಶನ ನೀಡಿದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ದಯಾನಂದ ರೈ ಮನವಳಿಕೆ, ಕಾರ್ಯದರ್ಶಿಗಳಾದ ಈಶ್ವರ ಗೌಡ ಪಜ್ಜಡ್ಕ, ಆಡಳಿತ ಮಂಡಳಿಯ ಎಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರು, ಆಡಳಿತಾಧಿಕಾರಿಗಳಾದ ಶ್ರೀಪತಿ ರಾವ್ ಎಚ್ ಪ್ರಾಂಶುಪಾಲರಾದ ರೂಪಾ ಜೆ ರೈ, ಹಾಗೂ ಉತ್ತಮ ಫಲಿತಾಂಶ ಪಡೆಯಲು ಶ್ರಮಿಸಿದ ಎಲ್ಲಾ ಶಿಕ್ಷಕ ವೃಂದದವರಿಗೆ, ಹಾಗೂ ಸಂಸ್ಥೆಯ ಎಲ್ಲಾ ಬೋಧಕ ಬೋಧಕೇತರ ವೃಂದದವರಿಗೆ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀನಾಥ್ ಗೌಡ ಕೇವಳ ಹಾಗೂ ಸರ್ವ ಸದಸ್ಯರಿಗೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಂದರ ಗೌಡ ನೋಟರಿ ವಕೀಲರು ಹಾಗೂ ಎಲ್ಲಾ ಸದಸ್ಯರಿಗೆ ಮುಖ್ಯ ಗುರುಗಳಾದ ನವೀನ್ ರೈ ಅವರು ಧನ್ಯವಾದ ಸಮರ್ಪಿಸಿದರು. ಹಾಗೂ ಉತ್ತಮ ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.