ಸುರತ್ಕಲ್: ಬೈಕ್ ನಲ್ಲಿ ತೆರಳುತ್ತಿದ್ದಾಗ ಮಹಿಳೆಯ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.ಮಹಿಳೆ ತನ್ನ ಮಗನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್ ಗೆ ಸಿಲುಕಿದ್ದು, ಮಹಿಳೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.. ತಕ್ಷಣವೇ ಹಿಂಬದಿಯಿಂದ ಬರುತ್ತಿದ್ದ ಬಸ್ಸ್ ವೊಂದರ ಚಾಲಕ ಮೊಯ್ಲಿ ಎಂಬವರು ತನ್ನ ಬಸ್ಸ್ ನಿಲ್ಲಿಸಿ ರಸ್ತೆಗೆ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವಲ್ಲಿ ಸಹಕರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸದ್ಯ ಚಾಲಕ ಮೊಯ್ಲಿ ಅವರ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.
