ಸುಹಾಸ್‌ ಹತ್ಯೆ ಮತ್ತು ಪಹಲ್ಗಾಮ್ ನಡೆದ ಉಗ್ರರ ದಾಳಿ ಖಂಡಿಸಿ ಚಿಕ್ಕಮಗಳೂರು ಜಿಲ್ಲೆ ಯಲ್ಲಿ ಬಂದ್‌ಗೆ ಕರೆ ನೀಡಿದೆ

|

ಚಿಕ್ಕಮಗಳೂರು : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಮತ್ತು ಮಂಗಳೂರಿನ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಭಜರಂಗ ದಳ ಮತ್ತು VHP ನಾಳೆ ಬಂದ್‌ಗೆ ಕರೆ ನೀಡಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6ಗಂಟೆ ವರೆಗೆ ಚಿಕ್ಕಮಗಳೂರು ನಗರ ಸೇರಿ 9 ತಾಲೂಕಿನಲ್ಲಿ ಬಂದ್‌ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಭಜರಂಗದಳ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿ ರಂಗನಾಥ್, ಪಾಕಿಸ್ತಾನದ ಮುಸ್ಲಿಮರು ಹಿಂದೂಗಳನ್ನ ಹತ್ಯೆ ಮಾಡುತ್ತಿದ್ದಾರೆ. ಭಜರಂಗದಳದ ಕಾರ್ಯಕರ್ತರನ್ನ ಗುರಿಯಾಗಿಸಿ ಹತ್ಯೆ ಮಾಡುತ್ತಿದ್ದಾರೆ. ಆದುದರಿಂದ ನಾಳೆ ಚಿಕ್ಕಮಗಳೂರು ಬಂದ್ ಕರೆ ನೀಡುತ್ತಿದ್ದೇವೆ ಎಂದರು